ಕರ್ನಾಟಕ

karnataka

ETV Bharat / state

ಪಾಠ ಮಾಡುವ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು - ಹೃದಯಾಘಾತದಿಂದ ಶಿಕ್ಷಕ ಸಾವು

ಪಾಠ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಶಿಕ್ಷಕರು ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ಎಲೆ ಚಾಕನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ..

teacher-died-while-teaching
ಹೃದಯಾಘಾತದಿಂದ ಶಿಕ್ಷಕ ಸಾವು

By

Published : Dec 25, 2021, 11:36 AM IST

Updated : Dec 25, 2021, 12:45 PM IST

ಮಂಡ್ಯ : ತರಗತಿಯಲ್ಲಿ ಪಾಠ ಮಾಡುವ ವೇಳೆ ಹೃದಯಾಘಾತವಾಗಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿ‌ನ ಎಲೆ ಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಜೇಶ್ ಎಂಬುವರು ಮೃತಪಟ್ಟ ಶಿಕ್ಷಕರು. ಶುಕ್ರವಾರ ಮಧ್ಯಾಹ್ನ ತರಗತಿಯಲ್ಲಿ ಪಾಠ ಮಾಡುವ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ತೂಬಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ‌ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ತರಗತಿಯಲ್ಲಿ ಶಿಕ್ಷಕ ಸಾವು : ಮೃತರ ನಿಧನಕ್ಕೆ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಹದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ಶಿಕ್ಷಕರ ಅಗಲಿಕೆಗೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.

Last Updated : Dec 25, 2021, 12:45 PM IST

ABOUT THE AUTHOR

...view details