ಮಂಡ್ಯ:ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.
ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಬಲಿ - ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ ಮಂಡ್ಯ
ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.
ಡೆಂಗ್ಯೂ ಜ್ವರಕ್ಕೆ ಬಲಿಯಾದ ಬಾಲಕಿ
ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿ ಗೀತಾ(16) ಸಾವಿಗೀಡಾಗಿದ್ದು, ಕಳೆದ 15 ದಿನಗಳಿಂದ ಗೀತಾ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವಿಗೀಡಾಗಿದ್ದು, ಗ್ರಾಮದಲ್ಲಿ ಆತಂಕ ಎದುರಾಗಿದೆ.
ಇನ್ನು ಡೆಂಘೀ ಜ್ವರದ ಭಯದಿಂದ ಎಲ್ಲ ಗ್ರಾಮಸ್ಥರಿಗೆ ರಕ್ತ ಪರೀಕ್ಷೆ ಮಾಡಿಸುವಂತೆ ಒತ್ತಾಯ ಮಾಡಲಾಗಿದೆ.