ಮಂಡ್ಯ: ಬೇಟೆಯಾಡಲು ಬಂದು ಮನೆಗೆ ನುಗ್ಗಿದ ಚಿರತೆಯನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ.
ಮಳವಳ್ಳಿ: ಬೇಟೆಯಾಡಲು ಬಂದ ಚಿರತೆಯನ್ನು ಮನೆಯೊಳಗೆ ಕೂಡಿಹಾಕಿದ ಗ್ರಾಮಸ್ಥರು - The villagers captured the cheetah
ಮನೆಗೆ ನುಗ್ಗಿದ ಚಿರತೆಯನ್ನು ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದ ಘಟನೆ ಮಳವಳ್ಳಿ ತಾಲೂಕಿನಲ್ಲಿ ಜರುಗಿದೆ.
ಮನೆಗೆ ನುಗ್ಗಿದ ಚಿರತೆ ಸೆರೆ ಹಿಡಿದ ಗ್ರಾಮಸ್ಥರು
ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಗ್ರಾ.ಪಂ ಸದಸ್ಯ ಶ್ರೀನಿವಾಸ್ ಅವರ ಮನೆಗೆ ಚಿರತೆ ನುಗ್ಗಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಮನೆಯ ಬಾಗಿಲು ಹಾಕಿ ಬೀಗ ಹಾಕಿ ಚಿರತೆಯನ್ನು ಬಂಧಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 2 ವರ್ಷದ ಚಿರತೆಯನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.