ಮಂಡ್ಯ: 13 ವರ್ಷದ ಹಿಂದೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಳವಳ್ಳಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಮಧು (32) ಬಂಧಿತ ಆರೋಪಿ. 2008 ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ಶಿಕ್ಷಕರೊಬ್ಬರು ಮನೆಯಲ್ಲಿ ಕಳ್ಳತನ ಮಾಡಿದ್ದ. ಈತನಿಗಾಗಿ ಬಲೆ ಬೀಸಿದ್ದ ಪೊಲೀಸರು 13 ವರ್ಷಗಳ ನಂತರ ಫಿಂಗರ್ ಪ್ರಿಂಟ್ ಆಧರಿಸಿ ಈತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಮಂಡ್ಯ: 13 ವರ್ಷದ ಹಿಂದೆ ಕಳ್ಳತನ ಮಾಡಿದ್ದ ಆರೋಪಿ ಬಂಧನ - ಮಂಡ್ಯದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧನ
2008 ರ ಕೃತ್ಯದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಮಧುವಿನಿಂದ 100ಗ್ರಾಂ ನ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿಸಿದ್ದಾರೆ.
![ಮಂಡ್ಯ: 13 ವರ್ಷದ ಹಿಂದೆ ಕಳ್ಳತನ ಮಾಡಿದ್ದ ಆರೋಪಿ ಬಂಧನ Theft arrested in Mandya](https://etvbharatimages.akamaized.net/etvbharat/prod-images/768-512-11221467-1040-11221467-1617169312679.jpg)
ಆರೋಪಿ
ಇದನ್ನೂ ಓದಿ:ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರ ಬಂಧನ.. 6 ಲಕ್ಷ ರೂ. ಮೌಲ್ಯದ 10 ವಾಹನಗಳು ವಶ
ಈ ಹಿಂದೆ ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಹಲವೆಡೆ ಕಳ್ಳತನ ನಡೆಸಿ ಸಿಕ್ಕಿ ಬಿದ್ದಿದ್ದ. ಈತ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದ. 2008 ರ ಕೃತ್ಯದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಮಧು ನಿಂದ 100ಗ್ರಾಂ ನ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನದ ವಶಕ್ಕೆ ನೀಡಿರುವುದಾಗಿ ತಿಳಿಸಿದ್ದಾರೆ.