ಮಂಡ್ಯ:ದಿನಸಿ ಅಂಗಡಿಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನ ದೋಚಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಿನಸಿ ಅಂಗಡಿಯಲ್ಲಿ ಕಳ್ಳತನ... ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ - mandya news
ದಿನಸಿ ಅಂಗಡಿಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನ ದೋಚಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಿನಸಿ ಅಂಗಡಿಯಲ್ಲಿ ಕಳ್ಳತನ..ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ
ಮುರುಕನಹಳ್ಳಿ ಗ್ರಾಮದ ಮೋಹನ್ ಎಂಬುವರ ದಿನಸಿ ಅಂಗಡಿಯಲ್ಲಿ ಘಟನೆ ನಡೆದಿದ್ದು, ಕಳ್ಳರು ಅಂಗಡಿಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ, ಸಿಗರೇಟ್, ದಿನಸಿ ಪದಾರ್ಥಗಳು ಸೇರಿ ಮತ್ತಿತರ ಸಾಮಗ್ರಿಗಳನ್ನ ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಕೈ ಚಳಕ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.