ಮಂಡ್ಯ : ಕೆಂಪೇಗೌಡ ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೆಸರು ಇಲ್ಲದಕ್ಕೆ ಕೆ.ಆರ್.ಪೇಟೆ ತಹಸೀಲ್ದಾರ್ ಶಿವಮೂರ್ತಿ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಆಹ್ವಾನ ಪತ್ರಿಕೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೆಸರು ನಾಪತ್ತೆ - Kannada news
ಕೆಂಪೇಗೌಡ ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೆಸರು ಇಲ್ಲದಕ್ಕೆ ಕೆ.ಆರ್.ಪೇಟೆ ತಹಸೀಲ್ದಾರ್ ಶಿವಮೂರ್ತಿ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡರು.
ಸಂಸದೆ ಸುಮಲತಾರನ್ನು ಆಹ್ವಾನಿಸದೆ ತಹಸೀಲ್ದಾರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಮುಖಂಡರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ತಹಸೀಲ್ದಾರ್ ವರ್ಗಾವಣೆಗೆ ಒತ್ತಾಯ ಮಾಡಿದ ಮುಖಂಡರು, ಇವರ ವಿರುದ್ಧ ಶಿಸ್ತು ಕ್ರಮಕ್ಕೆ ಡಿಸಿಗೆ ಮನವಿ ಮಾಡಲು ಮುಂದಾಗಿದ್ದಾರೆ. ಇದರಿಂದ ಹೆದರಿದ ತಹಸೀಲ್ದಾರ್ ಮುಖಂಡರಲ್ಲಿ ಕ್ಷಮೆಯಾಚಿಸಿದರು.