ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಆತಂಕ ಮೂಡಿಸಿವೆ. ಆದರೆ ಈಗ ಸೋಂಕಿತರು ಗುಣಮುಖರಾಗುತ್ತಿದ್ದು, ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದರಿಂದ ಮಂಡ್ಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಮಂಡ್ಯದಲ್ಲಿ ಇಂದು 13 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - Mandya corona cases
ಮಂಡ್ಯ ಜಿಲ್ಲೆಯಲ್ಲಿ ಇಂದು 13 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
Mandya
ಇಂದು ಗುಣಮುಖರಾದ 13 ಜನರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಮುಂಬೈ ಸೋಂಕು ಇಂದು ಮೂವರಲ್ಲಿ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 371 ಇದೆ. ಇವರಲ್ಲಿ ಇದುವರೆಗೆ 334 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 37 ಸಕ್ರಿಯ ಪ್ರಕರಣಗಳಿದ್ದು, ಇವರೆಲ್ಲರಿಗೂ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟಿನಲ್ಲಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ಸಹ ಹೆಚ್ಚಳವಾಗುತ್ತಿದೆ.