ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 1,301 ಜನರಿಗೆ ಕೊರೊನಾ ವಕ್ಕರಿಸಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38,145 ಕ್ಕೆ ಏರಿಕೆಯಾಗಿದೆ. ಇಂದು 1,191 ಮಂದಿ ಗುಣಮುಖರಾಗುವ ಮೂಲಕ ಚೇತರಿಸಿಕೊಂಡಿದ್ದಾರೆ. ಈವರೆಗೆ 29,479 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಈವರೆಗೆ ಒಟ್ಟು 247 ಮಂದಿ ಸಾವನ್ನಪ್ಪಿದ್ದಾರೆ.