ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಹೆಚ್ಚುತ್ತಿರುವ 'ಮಹಾ' ಕೊರೊನಾ: ಬೆಡ್ ಹೆಚ್ಚಳಕ್ಕೆ ಮುಂದಾದ ಜಿಲ್ಲಾಡಳಿತ - ಮಂಡ್ಯಕ್ಕೆ ಮುಂಬೈ ಕೊರೊನಾ ನಂಟು

ಮಂಡ್ಯ ಜಿಲ್ಲೆಯಲ್ಲಿ ಇಂದು ಒಂದೇ ದಿನ 62 ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ಹೆಚ್ಚಳ ಮಾಡಲಾಗುತ್ತಿದೆ.

ಕೋವಿಡ್- 19
ಕೋವಿಡ್- 19

By

Published : May 19, 2020, 4:28 PM IST

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 62 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ಹೆಚ್ಚಳ ಮಾಡಲಾಗುತ್ತಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ

ಸದ್ಯಕ್ಕೆ ಚಿಕಿತ್ಸೆ ನೀಡುತ್ತಿರುವ ಮಿಮ್ಸ್ 700 ಹಾಸಿಗೆ ಸಾಮಾರ್ಥ್ಯದ ಆಸ್ಪತ್ರೆಯಾಗಿದೆ. ಕೋವಿಡ್-19 ಚಿಕಿತ್ಸೆಗಾಗಿ ಸದ್ಯ 350 ಹಾಸಿಗೆಗಳ ಸಾಮಾರ್ಥ್ಯದ ಕೊಠಡಿಗಳನ್ನು ಮೀಸಲಿರಿಸಲಾಗಿದೆ. ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತಷ್ಟು ಹಾಸಿಗೆ ಹೆಚ್ಚಳ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

700 ಹಾಸಿಗೆ ಸಾಮಾರ್ಥ್ಯದ ಆಸ್ಪತ್ರೆ ಇದ್ದರೂ ಸಹ ಜಿಲ್ಲಾಡಳಿತ ಕೆಲ ಹೊಸ ಕಟ್ಟಡಗಳಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಬಹುದು ಎನ್ನಲಾಗಿದೆ.

ABOUT THE AUTHOR

...view details