ಮಂಡ್ಯ:ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಹಿನ್ನೆಲೆ ಕೆ.ಆರ್.ಪೇಟೆಯಲ್ಲಿ ಬೆಂಬಲಿಗರ ಜನ ಜಾತ್ರೆಯೇ ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನ: ಮದ್ಯ ಮಾರಾಟ ನಿಷೇಧಿಸಿದ ಜಿಲ್ಲಾಡಳಿತ - ನಾಮಪತ್ರ ಸಲ್ಲಿಕೆ.
ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾವಾದ್ದರಿಂದ ಜಿಲ್ಲಾಧಿಕಾರಿಗಳು, ನಾಳೆ ಮಧ್ಯರಾತ್ರಿವರೆಗೂ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಬಿ ಚಂದ್ರಶೇಖರ್, ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಎಲ್. ದೇವರಾಜು, ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ. ನಾರಾಯಣಗೌಡ ನಾಮಪತ್ರ ಸಲ್ಲಿಸಲಿದ್ದು, ರಾಷ್ಟ್ರ ಹಾಗೂ ರಾಜ್ಯ ನಾಯಕರ ಬೃಹತ್ ಮೆರವಣಿಗೆ ನಡೆಯುವ ಹಿನ್ನೆಲೆ ಜನರು ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.
ಮದ್ಯ ನಿಷೇಧ:
ನಾಳೆ ಮದ್ಯ ನಿಷೇಧ ಮಾಡಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ನ.18ರ ಮಧ್ಯರಾತ್ರಿವರೆಗೂ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಮಾಡಿದ್ದಾರೆ. ಜನರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುವ ಹಿನ್ನೆಲೆ ಹಾಗೂ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ ಮದ್ಯ ನಿಷೇಧ ಮಾಡಲಾಗಿದೆ.