ಮಂಡ್ಯ :ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಮಂಡ್ಯದಲ್ಲಿ ಜ.26ರಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು.
ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ನಾಳೆ ಬೃಹತ್ ಪರೇಡ್.. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಯ ವಿರುದ್ದ ಗಣರಾಜ್ಯೋತ್ಸವ ದಿನ ರೈತರ ಬೃಹತ್ ಪರೇಡ್ ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ಮಂಡ್ಯದ ಸಿಲ್ವರ್ ಜ್ಯೂಬ್ಲಿ ಪಾರ್ಕ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಎಪಿಎಂಸಿ ತಿದ್ದುಪಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಲಾಗುವುದು ಎಂದರು. ಈ ಪ್ರತಿಭಟನೆಯಲ್ಲಿ ಸಾವಿರಾರು ರೈತ ಬಂಧುಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಕೃಷಿ ಕಾಯ್ದೆ ವಿರೋಧಿಸಿ ಸಿಐಟಿಯು ಸಂಘಟನೆ, ವಿಕಲಚೇತನರ ಒಕ್ಕೂಟದಿಂದ ಪ್ರತಿಭಟನೆ