ಮಂಡ್ಯ:ದಂಪತಿ ತೆರಳುತ್ತಿದ್ದ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಅವರ ಪತಿ ಗಮಭೀರವಾಗಿ ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ರಸ್ತೆಯ ತಟ್ಟಹಳ್ಳಿ ಗೇಟ್ ಬಳಿ ನಡೆದಿದೆ.
ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ... ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ - ಮಂಡ್ಯ ಅಪರಾಧ ಸುದ್ದಿ
ದಂಪತಿ ಬರುತ್ತಿದ್ದ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತಳ ಪತಿ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.
Tractor collides with bike
ನಾಗಮಂಗಲ ತಾಲೂಕಿನ ಅಂಚಿಪುರ ಗ್ರಾಮದ ಚಂದ್ರಮ್ಮ (55) ಮೃತ ಮಹಿಳೆ. ಅವರ ಪತಿ ತಿಮ್ಮೇಗೌಡ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಪರಿಸ್ಥಿತಿ ತೀರ ಗಂಭೀರವಾಗಿದೆ.
ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.