ಮಂಡ್ಯ: ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಕೃಷ್ಣರಾಜಪೇಟೆ ಗ್ರಾಮಾಂತರ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಕ್ ಕಳ್ಳತನ ಮಾಡಿ ಮಾರುತ್ತಿದ್ದ ಇಬ್ಬರ ಬಂಧನ: 27 ಬೈಕ್ ವಶ - bike theives gang busted
ಬೈಕ್ ಕಳ್ಳತನ ಮಾಡಿ ಮಾರಾಟ ಮಾಡ್ತಿದ್ದ ಇಬ್ಬರು ಕಳ್ಳರನ್ನು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಕಂಪೆನಿಯ 27 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರಿಂದ ವಿವಿಧ ಕಂಪನಿಯ 27 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಊರುಗಳಿಗೆ ಸೇರಿರುವ ವಿಕಾಸ್ (21), ಚಿನ್ನು ಅಲಿಯಾಸ್ ಚಿನ್ನಸ್ವಾಮಿ (25) ಬಂಧಿತ ಆರೋಪಿಗಳು. ವಿಕಾಸ್‌ನಿಂದ 5.8 ಲಕ್ಷ ಮೌಲ್ಯದ ವಿವಿಧ ಕಂಪನಿಯ 17 ದ್ವಿಚಕ್ರ ವಾಹನಗಳನ್ನು ಹಾಗೂ ಚಿನ್ನಸ್ವಾಮಿಯಿಂದ 2.8 ಲಕ್ಷ ರೂ. ಮೌಲ್ಯದ 10 ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂದ್ದಾರೆ.
ಕಳ್ಳರನ್ನು ಬಂಧಿಸಲು ನಾಗಮಂಗಲ ಡಿವೈಎಸ್ಪಿ ನವೀನ್ ಕುಮಾರ್ ನೇತೃತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ದೀಪಕ್, ಪಟ್ಟಣ ಠಾಣೆಯ ಸಬ್ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುರೇಶ್ ಇತರ ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು.
ಬೈಕ್ ಕಳ್ಳರನ್ನು ಬಂಧಿಸಿ 27 ಮೋಟರ್ ಬೈಕುಗಳನ್ನು ವಶಪಡಿಸಿಕೊಂಡಿರುವ ಕೆ.ಆರ್.ಪೇಟೆ ವೃತ್ತದ ಪೊಲೀಸರ ಕಾರ್ಯದಕ್ಷತೆಯನ್ನು ಎಎಸ್ಪಿ ಧನಂಜಯ ಮತ್ತು ಎಸ್.ಪಿ ಕೆ. ಪರಶುರಾಮ್ ಅಭಿನಂದಿಸಿದ್ದಾರೆ.
ಇದನ್ನೂ ಓದಿ:ನಿಗದಿಪಡಿಸಿದ ದಿನಾಂಕಕ್ಕೆ ಮುನ್ನವೇ 'ಪೊಗರು' ಬಿಡುಗಡೆಗೆ ನಿರ್ಧಾರ..!