ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವಿಗೀಡಾದ ಘಟನೆ ನಾಗಮಂಗಲ ತಾಲೂಕಿನ ದಡಗ ಗ್ರಾಮದ ಕೆರೆಯಲ್ಲಿ ನಡೆದಿದೆ.
ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವಿಗೀಡಾದ ಘಟನೆ ನಾಗಮಂಗಲ ತಾಲೂಕಿನ ದಡಗ ಗ್ರಾಮದ ಕೆರೆಯಲ್ಲಿ ನಡೆದಿದೆ.
ದಡಗ ಗ್ರಾಮದ ಮಂಜು ಎಂಬವರ ಪುತ್ರ ಮನು (13) ಮತ್ತು ಪುನೀತ್(7) ಮೃತ ದುರ್ದೈವಿಗಳು. ಹಸು ಮೇಯಿಸಲು ತೆರಳಿದ್ದಾಗ ಕೆರೆಯಲ್ಲಿ ಬಳಿ ಈಜಲು ಹೋಗಿ ಈ ದುರ್ಘಟನೆ ನಡೆದಿದೆ. ಮೂವರಲ್ಲಿ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.