ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಇಬ್ಬರು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪಳದ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಚಪ್ಪಾಳೆ ತಟ್ಟಿ ಹಣ್ಣು ಹಾಗೂ ದೇಹದ ಪ್ರತಿರೋಧಕ ಶಕ್ತಿಯನ್ನ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಔಷಧಿಗಳನ್ನ ನೀಡಿ ಬೀಳ್ಕೊಟ್ಟರು.

Two Corona infected people released from hospital today
ಇಬ್ಬರು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ..ಇಂದು ಆಸ್ಪತ್ರೆಯಿಂದ ಬಿಡುಗಡೆ

By

Published : May 29, 2020, 7:07 PM IST

ಕೊಪ್ಪಳ:ಕೊಪ್ಪಳದ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಬ್ಬರು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ... ಆಸ್ಪತ್ರೆಯಿಂದ ಬಿಡುಗಡೆ

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಬಿ. ದಾನರಡ್ಡಿ, ಮಹಾರಾಷ್ಟ್ರದಿಂದ ಬಂದಿದ್ದ ಪಿ-1174 ಇಪ್ಪತ್ತು ವರ್ಷದ ಯುವತಿಗೆ ಮೇ 18ರಂದು ಸೋಂಕು ತಗುಲಿರೋದು ಖಚಿತವಾಗಿತ್ತು. ಇನ್ನು, ಪಿ-1175 ಇಪ್ಪತ್ತೈದು ವರ್ಷದ ಯುವಕನಾಗಿದ್ದು, ಈತ ತಮಿಳುನಾಡಿನಿಂದ ಬಂದಿದ್ದ. ಈತನಿಗೂ ಕೂಡ ಮೇ 18ರಂದು ಸೋಂಕು ದೃಢಪಟ್ಟಿತ್ತು. ಇಬ್ಬರಿಗೂ ಕೊಪ್ಪಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದರು.

ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದ ಇಬ್ಬರಿಗೆ ವೈದ್ಯರು, ಸಿಬ್ಬಂದಿ ಚಪ್ಪಾಳೆ ತಟ್ಟಿ ಹಣ್ಣು ಹಾಗೂ ದೇಹದ ಪ್ರತಿರೋಧಕ ಶಕ್ತಿಯನ್ನ ಹೆಚ್ಚಿಸಲು ಆಯುಷ್ ಇಲಾಖೆ ವಿತರಿಸಿದ ಔಷಧಿಗಳನ್ನ ನೀಡಿ ಬೀಳ್ಕೊಟ್ಟರು.

ABOUT THE AUTHOR

...view details