ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಮತ್ತಿಬ್ಬರು ಸೋಂಕಿತರು ಗುಣಮುಖ: 14 ಮಂದಿಗೆ ಮುಂದುವರೆದ ಚಿಕಿತ್ಸೆ - ಕೋವಿಡ್ 19

ಮಂಡ್ಯದಲ್ಲಿ ಇಬ್ಬರು ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಇಬ್ಬರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್​ ಮಾಹಿತಿ ನೀಡಿದ್ದಾರೆ.

quarantine centre
ಕ್ವಾರಂಟೈನ್ ಕೇಂದ್ರ

By

Published : May 11, 2020, 11:40 PM IST

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಕೊರೊನಾದಿಂದ ಗುಣಮುಖರಾದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಂದು ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಇಂದು ಹಾಸನ ಜಿಲ್ಲೆಯ ರೋಗಿ ಸೇರಿದಂತೆ ಎರಡು ಪ್ರಕರಣ ಬಂದರೂ, ಮತ್ತಿಬ್ಬರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 16 ಮಂದಿ ಗುಣಮುಖ ಹೊಂದಿದ್ದು, ಇಂದಿನ ಪ್ರಕರಣಗಳು ಸೇರಿದಂತೆ ಒಟ್ಟು 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ

ಇಂದು ಪತ್ತೆಯಾದ ಪಿ-862 ಮುಂಬೈನಿಂದ ರಾಜ್ಯದ ಗಡಿಯವರೆಗೂ ನಡೆದುಕೊಂಡು ಬಂದು ನಂತರ ಟ್ರಕ್ ಮೂಲಕ ಬೆಂಗಳೂರಿಗೆ ಆಗಮಿಸಿದ್ದ. ನಂತರ ಕೆ.ಆರ್.ಪೇಟೆಯಲ್ಲಿ ಇವರನ್ನು ತಕ್ಷಣ ಕ್ವಾರಂಟೈನ್ ಮಾಡಲಾಗಿತ್ತು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ತಿಳಿಸಿದರು.

ಹಾಸನದ ಪಿ-861 ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗೂಳಿ ಹೊನ್ನೇನಹಳ್ಳಿ ಗ್ರಾಮದವರಾಗಿದ್ದಾರೆ. ಇವರು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದಿದ್ದರು. ಮುಂಬೈ ಪ್ರಯಾಣ ಹಿನ್ನೆಲೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಈ ರೋಗಿಗೂ ಮಿಮ್ಸ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details