ಮಂಡ್ಯ: ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಯುವಕರು ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಮನೆ ಸೇರುವ ಬದಲು ಮಸಣ ಸೇರಿದ ಯುವಕರು - ಮಂಡ್ಯದಲ್ಲಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ
ಬೆಂಗಳೂರಿನಿಂದ ಊರಿಗೆ ಮರಳುತ್ತಿದ್ದ ವೇಳೆ, ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ
ನರಸೀಪುರ ತಾಲೂಕಿನ ಮಲಿಯೂರು ಗ್ರಾಮದ ಮಹೇಶ್( 30) ಹಾಗೂ ಮಾದೇಶ್ (23) ಮೃತ ದುರ್ದೈವಿಗಳು. ಇವರು ಬೆಂಗಳೂರಿನಿಂದ ಊರಿಗೆ ಬೈಕ್ನಲ್ಲಿ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತರು ಬೆಂಗಳೂರಿನ ಎವಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.