ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬಿರುವಹಳ್ಳಿ ಗ್ರಾಮದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ... ಇಬ್ಬರು ಸಾವು, ಹಲವರಿಗೆ ಗಾಯ - ಟ್ರಾಕ್ಟರ್ ಪಲ್ಟಿಯಾಗಿ ಜನ ಸಾವು,
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಚಂದಗೊಳಮ್ಮ ದೇಗುಲದಲ್ಲಿ ಪರ ಮಾಡಿ ಪರಿಕರಗಳ ಜೊತೆ ಗ್ರಾಮಕ್ಕೆ ವಾಪಸ್ಸು ಬರುವ ವೇಳೆ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಚಾಲಕನ ಅಜಾರುಕತೆಯಿಂದ ಈ ಅಪಘಾತ ಸಂಭವಿಸಿದೆ. ಕೆ.ಆರ್.ನಗರ ತಾಲ್ಲೂಕಿನ ತಂದ್ರೆ ಗ್ರಾಮದಿಂದ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ 7 ಜನರು ಹಾಗೂ
ತಮ್ಮೇಗೌಡ (45) ಮತ್ತು ಬಲರಾಮ್ (11) ಸ್ಥಳದಲ್ಲೆ ಮೃತಪಟ್ಟ ದುರ್ದೈವಿಗಳು.
ಟ್ರ್ಯಾಕ್ಟರ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡರು. ಈ ಘಟನೆ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ತಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.