ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಮೋದೂರು ಗ್ರಾಮದಲ್ಲಿ ನಡೆದಿದೆ. ರಾಜು(19) ಮತ್ತು ಪ್ರದೀಪ(21) ಮೃತ ದುರ್ದೈವಿಗಳು.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು - KR Pate rural Police Station
ಕೆರೆಯಲ್ಲಿ ಈಜಲು ತೆರಳಿ ಯುವಕರು ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೋದೂರು ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದು ವಾರಸುದಾರರಿಗೆ ಒಪ್ಪಿಸಿದ್ದಾರೆ.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಲಾಕ್ಡೌನ್ ಹಿನ್ನೆಲೆ ಮನೆಯಲ್ಲೇ ಇದ್ದ ಇಬ್ಬರು ಯುವಕರು ಈಜಲು ತೆರಳಿದ್ದಾರೆ. ಈ ವೇಳೆ ಕೆಸರಲ್ಲಿ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದು ವಾರಸುದಾರರಿಗೆ ಒಪ್ಪಿಸಿದ್ದಾರೆ. ಮೃತ ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ:ಕೊರೊನಾ ದುಃಖ ಸಾಗರದಲ್ಲಿ ಜಾಗತಿಕ ಆರ್ಥಿಕತೆ: ಆಗಸದ ಎತ್ತರಕ್ಕೆ ಜಿಗಿದ ಚೀನಾ GDP... ಭಾರತದ್ದು?