ಮಂಡ್ಯ:ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದು ಪೈಪೋಟಿ ಜೊತೆಗೆ ಗೊಂದಲಕ್ಕೆ ಕಾರಣವಾಗಿದೆ. ಇರುವ ಒಂದು ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆ ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಈ ಗೊಂದಲ ಮುಂದುವರಿಯಲಿದೆ.
ಉಮೇಶ್ ಅವರು ಡಿಡಿಪಿಯು ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಸೆ.5ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಯುಟ್ಯೂಬ್ ಬೆಂಗಳೂರಿನ ಪಿಯು ಬೋರ್ಡ್ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.