ಮಂಡ್ಯ:ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಸಮೀಪದ ವಿಶ್ವೇಶ್ವರಯ್ಯ ನಾಲೆಯಲ್ಲಿ ನಡೆದಿದೆ.
ಜವರೇಗೌಡ (34), ಬಸವೇಗೌಡ (26) ಮೃತ ದುರ್ದೈವಿಗಳು. ಸದ್ಯ ಓರ್ವನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಮೃತರು ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದವರಾಗಿದ್ದು, ಸಂಬಂಧಿಕರ ಮನೆಗೆ ಬಂದು ವಿಶ್ವೇಶ್ವರಯ್ಯ ನಾಲೆಗೆ ಈಜಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.