ಮಂಡ್ಯ: ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಆಲೆಮನೆ ಪುನಶ್ಚೇತನ ಹಾಗೂ ವಿದ್ಯಾವಂತ ಯುವಕರ ಹಾಗೂ ಉದ್ಯಮಿಗಳಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಎಂ.ಡಿ.ಸಿ.ಸಿ ಬ್ಯಾಂಕ್‌ನ ನೂತನ ಅಧ್ಯಕ್ಷ ಉಮೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ (ಎಂಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ರೈತರಿಗೆ ಅನುಕೂಲವಾಗುವಂತ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಲೆಮನೆ ನಿರ್ಮಾಣಕ್ಕೆ ಸಾಲ ಸೌಲಭ್ಯದ ತೀರ್ಮಾನ ಹಾಗೂ ಡಿಸಿಸಿ ಬ್ಯಾಂಕ್ ಹೊಸ ಬ್ರಾಂಚ್ ನಿರ್ಮಾಣ, ಹೊಸ ಸದಸ್ಯರಿಗೆ ಸಾಲ ನೀಡುವಂತ ವ್ಯವಸ್ಥೆ ಮಾಡಲಾಗುವುದು ಎಂದರು.