ಕರ್ನಾಟಕ

karnataka

ETV Bharat / state

ಮಂಡ್ಯ: ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ

ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಪಾಂಡವಪುರ ತಾಲೂಕನ್ನು ಸಂಪರ್ಕಿಸುವಂತೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಸಿರು ನಿಶಾನೆ ತೋರಿದ್ದಾರೆ.

Union Minister Nitin Gadkari
ನಿತಿನ್ ಗಡ್ಕರಿ

By

Published : Aug 5, 2021, 9:53 AM IST

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ತೂಬಿನಕೆರೆ ಬಳಿ ಪಾಂಡವಪುರ ರಸ್ತೆಗೆ ಸಂಪರ್ಕಿಸುವಂತೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಶಾಸಕ ಸಿ.ಎಸ್ ಪುಟ್ಟರಾಜು ದೂರವಾಣಿ ಮೂಲಕ ತಿಳಿಸಿದ್ದಾರೆ.

ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಯೋಜನೆಯಲ್ಲಿ ತೂಬಿನಕೆರೆ ಗ್ರಾಮದ ಬಳಿ ಈ ಹಿಂದೆ ಇದ್ದ ಬೈಪಾಸ್ ರಸ್ತೆ ಯೋಜನೆಯನ್ನು ಸ್ಥಗಿತಗೊಳಿಸಿ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಬಳಿ ಪಾಂಡವಪುರಕ್ಕೆ ಬೈಪಾಸ್ ನೀಡಲು ಯೋಜನೆ ರೂಪಿಸಿಕೊಂಡಿದ್ದರು. ಬದಲಾದ ಯೋಜನೆಯಿಂದ ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವವರು ಹಾಗೂ ಪಾಂಡವಪುರದಿಂದ ಮಂಡ್ಯಕ್ಕೆ ಹೋಗುವ ಪ್ರಯಾಣಿಕರು, ರೈತರು, ಆ ಭಾಗದ ಗ್ರಾಮೀಣ ಜನರು ಸುಮಾರು ಎರಡು ಕಿ.ಮೀ. ಹೆಚ್ಚುವರಿಯಾಗಿ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಸ್ತೆಗಿಳಿದು ಶಾಸಕ ಸಿ.ಎಸ್.ಪುಟ್ಟರಾಜು ಹೋರಾಟ:

ತೂಬಿನಕೆರೆ ಗ್ರಾಮದ ಬಳಿ ಬೈಪಾಸ್ ನೀಡುತ್ತಿಲ್ಲ ಎನ್ನುವ ವಿಚಾರ ತಿಳಿದು ಶಾಸಕ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಪಾಂಡವಪುರ ತಾಲೂಕಿನ ಜನರು ಇತ್ತೀಚೆಗೆ ರಸ್ತೆಗಿಳಿದು ಹೋರಾಟ ನಡೆಸಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸಿದ್ದರು. ಕೇಂದ್ರ ಸಚಿವರನ್ನು ಒಂದು ವಾರದೊಳಗೆ ನೇರವಾಗಿ ಭೇಟಿ ಮಾಡಿ, ಬೈಪಾಸ್ ರಸ್ತೆಗೆ ಅನುಮತಿ ದೊರಕಿಸಿಕೊಂಡು ಬರುತ್ತೇನೆ. ಅಲ್ಲಿಯವರೆಗೆ ಕಾಮಗಾರಿ ಮುಂದುವರೆಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಆನಂತರ ದೆಹಲಿಯಲ್ಲಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಇತ್ತೀಚೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಶಾಸಕ ಸಿ.ಎಸ್. ಪುಟ್ಟರಾಜು ತೆರಳಿ ಮಾತುಕತೆ ನಡೆಸಿದ್ದರು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಪಾಂಡವಪುರ ತಾಲೂಕನ್ನು ಸಂಪರ್ಕಿಸುವ ರಸ್ತೆಗೆ ಬೈಪಾಸ್ ನಿರ್ಮಿಸಿ ಸಂಪರ್ಕ ಕಲಿಸುವಂತೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದರು.

ನಿತಿನ್ ಗಡ್ಕರಿ ಭೇಟಿ ಮಾಡಿದ ಹೆಚ್.ಡಿ.ದೇವೇಗೌಡ, ಸಿ.ಎಸ್. ಪುಟ್ಟರಾಜು

ಬೈಪಾಸ್ ರಸ್ತೆಗೆ ಸಂಪರ್ಕ ಕಲ್ಪಿಸದಿದ್ದರೆ ಸಾರ್ವಜನಿಕರು ಸಂಚರಿಸಲು ಹಾಗೂ ರೈತರು ಕೃಷಿ ಉತ್ಪನ್ನಗಳನ್ನು ಸಾಗಿಸಲು ಎದುರಿಸುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ನಂತರ ಮಾಜಿ ಪ್ರಧಾನಿ ಹಾಗೂ ಶಾಸಕ ಸಿ.ಎಸ್.ಪುಟ್ಟರಾಜು ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೈಪಾಸ್ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು.

ಇದೇ ವೇಳೆ ಶ್ರೀರಂಗಪಟ್ಟಣದಿಂದ ಪಾಂಡವಪುರ ತಾಲೂಕು ಮಾರ್ಗವಾಗಿ ಚನ್ನರಾಯಪಟ್ಟಣದವರೆಗೂ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡುವಂತೆ ಶಾಸಕ ಪುಟ್ಟರಾಜು ಅವರು ಮನವಿಗೂ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಹೇಳಲಾಗಿದೆ.

ABOUT THE AUTHOR

...view details