ಕರ್ನಾಟಕ

karnataka

ETV Bharat / state

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ - dead body

ಕಂನಾಯಕನಹಳ್ಳಿ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನನಿಸಲಾಗಿದೆ.

unknown dead body found in mandya
ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಅಪರಿಚಿತ ಮೃತ ದೇಹ ಪತ್ತೆ

By

Published : Dec 10, 2020, 11:14 AM IST

ಮಂಡ್ಯ: ಮುಖಕ್ಕೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಂನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದ ಕಬ್ಬಿನಗದ್ದೆಯಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇಂದು ಬೆಳಗ್ಗೆ ಗ್ರಾಮದ ಜನರು ಎಂದಿನಂತೆ ಗದ್ದೆಗೆ ತೆರಳುತ್ತಿದ್ದ ಸಂದರ್ಭ ಮೃತದೇಹ ಕಂಡು, ಮಂಡ್ಯ ಗ್ರಾಮಾಂತರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:ಕೂಡ್ಲಿಗಿ: ಸಾವಿನಲ್ಲೂ ಒಂದಾದ ವೃದ್ಧ ದಂಪತಿ

ಸದ್ಯ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ABOUT THE AUTHOR

...view details