ಮಂಡ್ಯ: ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಡ್ಯದ ಯಲಿಯೂರು ಮತ್ತು ಬ್ಯಾಡರಹಳ್ಳಿ ರೈಲು ನಿಲ್ದಾಣದ ಮಧ್ಯೆ ನಡೆದಿದೆ. ಮೃತ ವ್ಯಕ್ತಿ ಸುಮಾರು 50 ವರ್ಷದ ಪುರುಷನಾಗಿದ್ದು, ಗುರುತು ಪತ್ತೆಯಾಗಿಲ್ಲ. ಗ್ರಾಮಸ್ಥರು ಈ ಕುರಿತು ಮಾಹಿತಿ ನೀಡಿದ ಹಿನ್ನೆಲೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು - ಮಂಡ್ಯ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ಗುರುತು ಪತ್ತೆಯಾಗದ ಹಿನ್ನೆಲೆ ಮಂಡ್ಯ ಮಿಮ್ಸ್ ಶವಾಗಾರಕ್ಕೆ ಈತನ ಮೃತ ದೇಹ ರವಾನಿಸಲಾಗಿದೆ..
ಅಪರಿಚಿತ ವ್ಯಕ್ತಿ ಸಾವು
ಗುರುತು ಪತ್ತೆಯಾಗದ ಹಿನ್ನೆಲೆ ಮಂಡ್ಯ ಮಿಮ್ಸ್ ಶವಾಗಾರಕ್ಕೆ ಈತನ ಮೃತ ದೇಹ ರವಾನಿಸಲಾಗಿದೆ. ವಾರಸುದಾರರು ಇದ್ದಲ್ಲಿ ಮಂಡ್ಯ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.