ಮಂಡ್ಯ : ಜಿಲ್ಲೆಯಲ್ಲಿ ಪೊಲೀಸರು ವಾಹನ ಸಂಚಾರಕ್ಕೆ ಷರತ್ತು ಬದ್ಧ ಅನುಮತಿ ನೀಡಿದ್ದು, ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನರು ರಸ್ತೆಗಿಳಿದಿದ್ದಾರೆ.
ರಾಜ್ಯ ಸರ್ಕಾರ ಕೋವಿಡ್ ಎರಡನೇ ಅಲೆಯಿಂದಾಗಿ ಟಫ್ ರೂಲ್ಸ್ ಜಾರಿ ಮಾಡಿತ್ತು. ಹೀಗಾಗಿ, ಕಳೆದೆರಡು ದಿನಗಳಿಂದ ಲಾಕ್‌ಡೌನ್ ಸಂಪೂರ್ಣ ಯಶಸ್ವಿಯಾಗಿತ್ತು.

ಆದ್ರೆ, ಇಂದಿನಿಂದ ಪೊಲೀಸರು ವಾಹನ ಸಂಚಾರಕ್ಕೆ ಅನುಮತಿ ನೀಡಿದ ಹಿನ್ನೆಲೆ ಜನರು ವಾಹನದಲ್ಲಿ ಬಂದು ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದಿದ್ದಾರೆ.
2 ದಿನ ಲಾಕ್‌ಡೌನ್ ಸಂಪೂರ್ಣ ಯಶಸ್ವಿಗೊಳಿಸಿದ ಪೊಲೀಸರು 3ನೇ ದಿನ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ವಾಹನ ತೆಗೆದುಕೊಂಡು ಬಂದರೆ ಪೊಲೀಸರು ಸೀಜ್ ಮಾಡುತ್ತಿದ್ದರು. ಆದ್ರೆ, ಇಂದು ಎಲ್ಲಾ ರಸ್ತೆಗಳಲ್ಲೂ ವಾಹನಗಳದ್ದೇ ದರ್ಬಾರ್ ನಡೆಯುತ್ತಿದ್ದರೂ ಸಹ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ.