ಕರ್ನಾಟಕ

karnataka

ETV Bharat / state

ಇ - ಸ್ವತ್ತು ಮಾಡಿಕೊಡಲು‌ ಲಂಚ: ಗ್ರಾ.ಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ - ಲೋಕಾಯುಕ್ತಕ್ಕೆ ದೂರು

ದಯಾನಂದ್​ ಅವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಮಂಜುನಾಥ್​ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

Village Secretary who fell into Lokayukta's trap
ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಕಾರ್ಯದರ್ಶಿ

By

Published : May 25, 2023, 12:53 PM IST

Updated : May 25, 2023, 2:49 PM IST

ಮಂಡ್ಯ: ವ್ಯಕ್ತಿಯೊಬ್ಬರಿಂದ ಇ- ಸ್ವತ್ತು ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಬುಧವಾರ ಬೆಳಗ್ಗೆ ದಾಳಿ ನಡೆದಿದೆ. ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಯಾನಂದ್ ಆರೋಪಿ ಅಧಿಕಾರಿಯಾಗಿದ್ದು, 5 ಸಾವಿರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮಂಜುನಾಥ್ ಎಂಬುವರ ಮನೆ, ಖಾಲಿ ನಿವೇಶನದ ಇ-ಸ್ವತ್ತು ಮಾಡಿಕೊಡಲು‌ ದಯಾನಂದ್ 40,000 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಬುಧವಾರ ಬೆಳಗ್ಗೆ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮುಂಗಡವಾಗಿ 5 ಸಾವಿರ ರೂಪಾಯಿ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಇನ್​ಸ್ಪೆಕ್ಟರ್​ಗಳಾದ ಪ್ರಕಾಶ್, ಬ್ಯಾಟರಾಯ ಗೌಡ, ಮೋಹನ್ ರೆಡ್ಡಿ ಹಾಗೂ ಸಿಬ್ಬಂದಿ ಶಂಕರ್, ಶರತ್, ಮಹದೇವಯ್ಯ, ಯೋಗೇಶ್, ನಂದೀಶ್, ನಂದಿನಿ ಇದ್ದರು.

ಇದನ್ನೂ ಓದಿ:ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ವಿಲೇಜ್ ಫೀಲ್ಡ್ ಅಸಿಸ್ಟೆಂಟ್​​: ಬಾಡಿಗೆ ಮನೆಯಲ್ಲಿ ಪತ್ತೆಯಾಯ್ತು 17 ಕೆಜಿ ಚಿನ್ನಾಭರಣ, ಕೋಟಿ ಹಣ!

ನಿನ್ನೆ ಬೆಂಗಳೂರಿನ ಶಿವಾಜಿನಗರ ಮಹಿಳಾ ಪೊಲೀಸ್​ ಠಾಣೆಯ ಪಿಎಸ್​ಐ ಸವಿತಾ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪೊಲೀಸ್​ ವಶದಲ್ಲಿದ್ದ ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಸವಿತಾ ಅವರು 50 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಆರೋಪಿ ಕಡೆಯವರು ಅಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಅಂತಿಮವಾಗಿ ಹದಿನೈದು ಸಾವಿರ ನೀಡುವುದಾಗಿ ಒಪ್ಪಿಕೊಂಡಿದ್ದಾರೆ. ಹಣ ನೀಡಲು ಒಪ್ಪಿಕೊಂಡ ಆರೋಪಿ ಕಡೆಯವರಾದ ಅನಂತ್​ ಕುಮಾರ್​ ಎನ್ನುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್​ ಕಾರ್ಯಾಚರಣೆ ಕೈಗೊಂಡು ಹಣ ಸ್ವೀಕರಿಸುತ್ತಿರುವಾಗಲೇ ಸವಿತಾ ಅವರನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಕಳೆದ ವಾರ ದಾವಣಗೆರೆಯಲ್ಲಿ ಮನೆ ಖರೀದಿ ಪತ್ರಕ್ಕಾಗಿ ಲಂಚ ಪಡೆಯುತ್ತಿದ್ದ ವೇಳೆ ಸಬ್​ ರಿಜಿಸಸ್ಟ್ರಾರ್​ ಕಚೇರಿಯ ದಸ್ತು ಬರಹಗಾರನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಂ ಬಿ ಪರಮೇಶ್ವರ್​ ಅದೇ ಪಟ್ಟಣದ ನಿವಾಸಿ ಮಂಜುನಾಥ್​ ಎನ್ನುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸೇಲ್​ ಡೀಡ್​ ನೋಂದಣಿ ಪತ್ರಕ್ಕಾಗಿ ಮಂಜುನಾಥ್​ ರಿಜಿಸ್ಟ್ರಾರ್​ ಕಚೇರಿಗೆ ಹೋಗಿದ್ದರು.

ಆ ವೇಳೆ ಪರಮೇಶ್ವರ್​ ಪತ್ರ ಬೇಕಾದಲ್ಲಿ 20 ಸಾವಿರ ರೂ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಒಪ್ಪಿಕೊಂಡ ಮಂಜುನಾಥ್​, ಇತ್ತ ಕಡೆ ಲೋಕಾಯುಕ್ತಕ್ಕೂ ದೂತರು ನೀಡಿದ್ದರು. ದೂರಿನ ಅನ್ವಯ 13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಪರಮೇಶ್ವರ್​ ಅವರನ್ನು ಲೋಕಾಯುಕ್ತ ಬಂಧಿಸಿದೆ.

ಇದನ್ನೂ ಓದಿ:ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ವಿಲೇಜ್ ಫೀಲ್ಡ್ ಅಸಿಸ್ಟೆಂಟ್​​: ಬಾಡಿಗೆ ಮನೆಯಲ್ಲಿ ಪತ್ತೆಯಾಯ್ತು 17 ಕೆಜಿ ಚಿನ್ನಾಭರಣ, ಕೋಟಿ ಹಣ!

Last Updated : May 25, 2023, 2:49 PM IST

ABOUT THE AUTHOR

...view details