ಕರ್ನಾಟಕ

karnataka

ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಕಾಮುಕನನ್ನು ಥಳಿಸಿ ಕೊಂದ ಗ್ರಾಮಸ್ಥರು - ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನನ್ನು ಸ್ಥಳೀಯ ಗ್ರಾಮಸ್ಥರೇ ಥಳಿಸಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

dsdd
ಕಾಮುಕನನ್ನು ಥಳಿಸಿ ಕೊಂದ ಗ್ರಾಮಸ್ಥರು

By

Published : Aug 1, 2020, 2:46 PM IST

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಗ್ರಾಮಸ್ಥರು ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಎಸ್.ಐ ಕೋಡಿಹಳ್ಳಿಯಲ್ಲಿ ನಡೆದಿದೆ.

ಎಸ್.ಐ ಕೋಡಿಹಳ್ಳಿ ಗ್ರಾಮದ ನಿವಾಸಿ ಭೈರ (31) ಹತ್ಯೆಯಾದ ವ್ಯಕ್ತಿ. ಅಂದಾಜು 8 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ಸಂಬಂಧಿಕರು ಸೇರಿದಂತೆ ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಭೈರ ಮಿಮ್ಸ್​ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸಂತ್ರಸ್ತೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ABOUT THE AUTHOR

...view details