ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಮಾತನಾಡಿದರು ಮಂಡ್ಯ:ಏಪ್ರಿಲ್ 26ಕ್ಕೆ ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಬಿಜೆಪಿ ಪರವಾಗಿ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಮಂಗಳವಾರ ಸಂಜೆ (ಏ.25) ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ:ವೀರಶೈವ ಲಿಂಗಾಯತರಲ್ಲಿ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ : ಬಿ ವೈ ವಿಜಯೇಂದ್ರ
ಅದೇ ದಿನ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ, ಯೋಗಿ ಆದಿತ್ಯನಾಥ್ ಅವರು ಆದಿ ಚುಂಚನಗಿರಿ ಮಠದ ನಿರ್ಮಾಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏ. 26ರಂದು ಬೆಳಗ್ಗೆ ಮತ್ತೆ ಕಾಲಭೈರವೇಶ್ವರನಿಗೆ ಯೋಗಿ ಪೂಜೆ ಮುಗಿಸಿ ಬಳಿಕ 11 ಗಂಟೆಗೆ ಮಂಡ್ಯಕ್ಕೆ ಆಗಮಿಸಲಿದ್ದಾರೆ.
ಇದನ್ನೂ ಓದಿ:ಜೆಡಿಎಸ್ ಚುನಾವಣಾ ಪ್ರಚಾರ ಸಮಿತಿ ರಚನೆ: ಅಧ್ಯಕ್ಷರಾಗಿ ಸಿ.ಎಂ. ಧನಂಜಯ ನೇಮಕ
ಮಂಡ್ಯದ ಸಂಜಯ ವೃತ್ತದಿಂದ ಯೋಗಿ ರೋಡ್ ಶೋ ಆರಂಭಿಸಿ ಸಂಜಯ ವೃತ್ತ, ಆರ್.ಪಿ. ರಸ್ತೆ, ಕರ್ನಾಟಕ ಬಾರ್ ವೃತ್ತ, ಜೋಡಿ ರಸ್ತೆ, ಹೊಸಹಳ್ಳಿ ವೃತ್ತ, ವಿವಿ ರಸ್ತೆ, ಮಹಾವೀರ ವೃತ್ತದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಳಿಕ 12 ಗಂಟೆಗೆ ಸಿಲ್ವರ್ ಜೂಬಿಲಿ ಪಾರ್ಕ್‌ನಲ್ಲಿ ಬಹಿರಂಗ ಸಮಾವೇಶ ನಡೆಸಿಲಿದ್ದಾರೆ. ನಂತರ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಮತದಾರರ ಸೆಳೆಯಲಿದ್ದಾರೆ. ಜಿಲ್ಲೆಯಾದ್ಯಂತ ರಸ್ತೆಯುದ್ದಕ್ಕೂ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ. ಉಮೇಶ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ನಮ್ಮ ಸರ್ಕಾರ ಬಂದ್ರೆ ಕಬ್ಬಿಗೆ ಏಕರೂಪ ದರ ನಿಗದಿ: ರಾಹುಲ್ ಗಾಂಧಿ ಭರವಸೆ
ಇದನ್ನೂ ಓದಿ:ವೀರಶೈವ ಮತಗಳು ಕೈಬಿಡುತ್ತವೆ ಎಂಬ ಆತಂಕ ಇಲ್ಲ : ಸಿಎಂ ಬೊಮ್ಮಾಯಿ