ಮಂಡ್ಯ:ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ಸಂಸ್ಕೃತಿ ಆರಂಭವಾದ ಹಿನ್ನೆಲೆಯಲ್ಲಿ ಮದ್ದೂರಿನ ಮತದಾರರು ಪೊರಕೆ ಹಿಡಿದು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ರೆಸಾರ್ಟ್ ರಾಜಕೀಯದ ವಿರುದ್ಧ ಆಕ್ರೋಶ: ಮದ್ದೂರಲ್ಲಿ ಪ್ರತಿಭಟನೆ - undefined
ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ಸಂಸ್ಕೃತಿ ಆರಂಭವಾದ ಹಿನ್ನೆಲೆಯಲ್ಲಿ ಮದ್ದೂರಲ್ಲಿ ಕೆಂಪೇಗೌಡ ಒಕ್ಕಲಿಗ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
![ರೆಸಾರ್ಟ್ ರಾಜಕೀಯದ ವಿರುದ್ಧ ಆಕ್ರೋಶ: ಮದ್ದೂರಲ್ಲಿ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-3785313-thumbnail-3x2-yadgiri.jpg)
Mandya
ರೆಸಾರ್ಟ್ ರಾಜಕೀಯ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಮತದಾರರು
ಮದ್ದೂರಿನ ಟಿಬಿ ವೃತ್ತದಲ್ಲಿ ತಾಲೂಕು ಕೆಂಪೇಗೌಡ ಒಕ್ಕಲಿಗ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕೈಯಲ್ಲಿ ಪೊರಕೆ ಹಿಡಿದು ರಾಜೀನಾಮೆ ನೀಡಿರುವ ಶಾಸರ ವಿರುದ್ಧ ಘೋಷಣೆ ಕೂಗಿದರು. ಮುಂಬೈನಲ್ಲಿ ಕುಳಿತಿರುವ ಶಾಸಕರ ವಿರುದ್ಧ ಆಕ್ರೋಶ ಹೊರ ಹಾಕಿದರು.
ಶಾಸಕರು ಈ ರೀತಿ ಮಾಡವ ಬದಲು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮತದಾರರು ಕೊಟ್ಟ 5 ವರ್ಷದ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿ, ಪಕ್ಷದ ವರಿಷ್ಠರ ತೀರ್ಮಾನ ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು.