ಕರ್ನಾಟಕ

karnataka

ETV Bharat / state

ಮಂಡ್ಯದ ನಾಲೆಗಳಿಗೆ ನೀರು ಬಿಡದಿದ್ದರೆ ಉಗ್ರ ಹೋರಾಟ: ರೈತರ ನೇರಾನೇರ ಎಚ್ಚರಿಕೆ - kannadanews

ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಬೆಂಗಳೂರು ಮೈಸೂರು ಹೆದ್ದಾರಿ ತಡೆ ನಡೆಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

By

Published : Jul 2, 2019, 2:32 PM IST

ಮಂಡ್ಯ: ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ರೈತರ ಹೋರಾಟ ತೀವ್ರಗೊಂಡಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆ ಜೊತೆಗೆ ಶಿವಳ್ಳಿ ಗ್ರಾಮದಲ್ಲಿ ರೈತರು ಹೋರಾಟ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀರು ಬಿಡದೇ ರಾಜಕೀಯ ದ್ವೇಷವನ್ನು ರಾಜ್ಯ ಸರ್ಕಾರ ಸಾಧಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ರೈತರ ಸಿಎಂ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದು, ಈಗ ಸಿಎಂ ರೈತರ ಸಂಕಷ್ಟ ಪರಿಹಾರಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದ್ರು. ನೀರು ಬಿಡುವಂತೆ ಆಗ್ರಹಿಸಿ ನೂರಾರು ರೈತರು ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ಇನ್ನಾದರೂ ನೀರು ಬಿಡುಗಡೆ ಮಾಡಿ ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯ ಮಾಡಿದರು. ಇದೇ ವೇಳೆ, ಬೆಳೆ ರಕ್ಷಣೆಗಾಗಿ 10 ದಿನಗಳ ಒಳಗಾಗಿ ನೀರು ಬಿಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಜಿಲ್ಲಾ ಬಿಜೆಪಿ ನೀಡಿದೆ.

ABOUT THE AUTHOR

...view details