ಮಂಡ್ಯ:ಭೂ ಸುಧಾರಣ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೂನ್ 24 ರಂದು ಸಚಿವರು ಹಾಗೂ ಎಲ್ಲ ಶಾಸಕರ ಮನೆ ಮುಂದೆ ಪ್ರತಿಭಟನೆಗೆ ರೈತ ಸಂಘ ಕರೆ ನೀಡಿದೆ.
ಭೂ ಸುಧಾರಣ ಕಾಯ್ದೆ ತಿದ್ದುಪಡಿಗೆ ವಿರೋಧ: ಸಿಎಂ ಮನೆಗೆ ಮುತ್ತಿಗೆ ಎಚ್ಚರಿಕೆ - Opposition to Land Reform Act Amendment
ಭೂ ಸುಧಾರಣ ಕಾಯ್ದೆ ತಿದ್ದುಪಡಿಯನ್ನು ಸರ್ಕಾರ ಹಿಂಪಡೆಯದಿದ್ದರೆ ಜುಲೈ ಮೊದಲ ವಾರದಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಎಚ್ಚರಿಸಿದ್ದಾರೆ.
ರೈತ ಸಂಘದಿಂದ ಸಿಎಂ ಮನೆಗೆ ಮುತ್ತಿಗೆಯ ಎಚ್ಚರಿಕೆ
ರೈತ ವಿರೋಧಿ ಕಾಯ್ದೆ ತರಲು ಸರ್ಕಾರ ಮುಂದಾಗಿದೆ. ರೈತರಿಗೆ ದ್ರೊಹ ಮಾಡಲು ಹೊರಟಿದೆ, ಹೀಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.
ರಾಜ್ಯದ ಕಂದಾಯ ವಲಯಗಳ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಜೂನ್ 29 ರಂದು ಬೃಹತ್ ಪ್ರತಿಭಟನೆ ಮಾಡಲಾಗುವುದು. ಸರ್ಕಾರ ತಕ್ಷಣವೇ ತಿದ್ದುಪಡಿ ಹಿಂಪಡೆಯದಿದ್ದರೆ ಜುಲೈ ಮೊದಲ ವಾರದಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
TAGGED:
ಭೂ ಸುಧಾರಣ ಕಾಯ್ದೆ ತಿದ್ದುಪಡಿ