ಮಂಡ್ಯ: ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್ ಸಾಂಕ್ರಮಿಕ ರೋಗದಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಮುಂದಾಗಿದೆ.
ಕೊರೊನಾದಿಂದ ಪೋಷಕರ ಕಳೆದುಕೊಂಡ ಮಕ್ಕಳ ಶೈಕ್ಷಣಿಕ ಜೀವನ ನಮ್ಮದು: ಆದಿಚುಂಚನಗಿರಿ ಶ್ರೀ
ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ತಂದೆ, ತಾಯಿ ಹಾಗೂ ಪೋಷಕರು ಮೃತರಾಗಿರುತ್ತಾರೆ. ಈ ಮೃತರಾದವರ ಮಕ್ಕಳಿಗೆ ಆಶ್ರಯವಿಲ್ಲದೇ, ಅನ್ನ, ಶಿಕ್ಷಣಕ್ಕೂ ಸಂಕಷ್ಟ ಪರಿಸ್ಥಿತಿಗೆ ಒಳಗಾಗಿರುವುದು, ಮಕ್ಕಳು ಅನಾಥರಾಗಿರುವ ಘಟನೆಗಳು ಹೆಚ್ಚುತ್ತಲೇ ಇವೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀಗಳು ಹೇಳಿದ್ದಾರೆ.
ಕೋವಿಡ್ ಎರಡನೇ ಅಲೆಯಿಂದ ತೀವ್ರತರವಾದ ಸಂಕಷ್ಟವನ್ನು ಜನರು ಅನುಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಅನಾಥರಾಗಿರುವ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಮಠದ ವತಿಯಿಂದ ವಹಿಸಿಕೊಳ್ಳಲಾಗುವುದು ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ತಿಳಿಸಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ತಂದೆ, ತಾಯಿ ಹಾಗೂ ಪೋಷಕರು ಮೃತರಾಗಿರುತ್ತಾರೆ. ಈ ಮೃತರಾದವರ ಮಕ್ಕಳಿಗೆ ಆಶ್ರಯವಿಲ್ಲದೇ, ಅನ್ನ, ಶಿಕ್ಷಣಕ್ಕೂ ಸಂಕಷ್ಟ ಪರಿಸ್ಥಿತಿಗೆ ಒಳಗಾಗಿರುವುದು, ಮಕ್ಕಳು ಅನಾಥರಾಗಿರುವ ಘಟನೆಗಳು ಹೆಚ್ಚುತ್ತಲೇ ಇವೆ. ಈ ಹಿನ್ನೆಲೆ ಅನ್ನ, ಅಕ್ಷರ, ಆರೋಗ್ಯ ಸೇವೆಗೆ ಸದಾ ಮುಂದಿರುವ ಶ್ರೀ ಮಠವು, ಮಾನವೀಯ ದೃಷ್ಟಿಯಿಂದ ಸಂಕಷ್ಟದಲ್ಲಿರುವ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲಿದೆ ಎಂದು ಸ್ವಾಮೀಜಿ ಅವರು ತಿಳಿಸಿದ್ದಾರೆ.