ಮಂಡ್ಯ: ಮದ್ದೂರು ಸಮೀಪದ ವೈದ್ಯನಾಥಪುರದ ವೈದ್ಯನಾಥೇಶ್ವರ ದೇವಸ್ಥಾನದ ಮುಂದೆ ಹರಿಯುವ ಶಿಂಷಾ ನದಿಯಲ್ಲಿ ಮೂರು ಕಾಡಾನೆಗಳು ಕಂಡು ಬಂದಿದ್ದು, ಅವುಗಳನ್ನು ಕಾಡಿಗಟ್ಟುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತೊಡಗಿದ್ದಾರೆ.
ಮುತ್ತತ್ತಿ ಅರಣ್ಯ ಪ್ರದೇಶದ ಕಡೆಯಿಂದ ಬಂದಿರುವ ಕಾಡಾನೆಗಳು, ಕೋಡಿಹಳ್ಳಿ ಭಾಗದಲ್ಲಿ ಬುಧವಾರ ಕಾಣಿಸಿಕೊಂಡಿದ್ದವು. ಇವುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಮ್ಮೆಟ್ಟಿಸಿದ್ದರು. ಆದರೆ, ಗುರುವಾರ ವಾಪಸ್ ಬಂದಿದ್ದು, ಶಿಂಷಾ ನದಿಯಲ್ಲಿ ಕಾಣಿಸಿಕೊಂಡಿವೆ.