ಮಂಡ್ಯ:ಪ್ರೀತಿಸುವಂತೆ ಬಲವಂತ ಮಾಡಿದ ಯುವಕನಿಂದ ನೊಂದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕನಿಂದ ನೊಂದು ಯುವತಿ ನೇಣಿಗೆ ಶರಣು - ಆತ್ಮಹತ್ಯೆ ಮಾಡಿಕೊಂಡ ಯುವತಿ
ಪ್ರೀತಿ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ಯುವಕನಿಂದ ನೊಂದ ಯುವತಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.
ಆತ್ಮಹತ್ಯೆ
ಸುಂಡಹಳ್ಳಿ ಗ್ರಾಮದ ರಮ್ಯ (22) ಮೃತ ಯುವತಿ. ಅದೇ ಗ್ರಾಮದ ಶಿವರಾಜ್ ಎಂಬ ಯುವಕ ಪ್ರೀತಿ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ರಾತ್ರಿ ಮನೆಯ ಬಳಿ ಬಂದು ಪ್ರೀತಿಸುವಂತೆ ಜಗಳ ಮಾಡಿ ಯುವಕ ಕಿರುಕುಳ ನೀಡಿದ್ದ, ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಸಾಯುವ ಮುನ್ನ ಡೆತ್ನೋಡ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.