ಮಂಡ್ಯ: ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಂಡು ಬಂದಿದೆ. ಹಲಗೂರು ಸಮೀಪದ ಮುಳ್ಳಯ್ಯನ ಕಟ್ಟೆ ಬಳಿ ಸುಮಾರು 30 ವರ್ಷದ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ಮಹಿಳೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರೋದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ - ಮಂಡ್ಯದಲ್ಲಿ ಮಹಿಳೆಯ ಶವ ಪತ್ತೆ,
ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಕಂಡು ಬಂದಿದೆ.
ಮಂಡ್ಯದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಧನರಾಜ್ ಹಾಗೂ ಹಲಗೂರು PSI ಮಾರುತಿ ತಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಶವ ರವಾನಿಸಲಾಗಿದೆ.
ಈ ಸಂಬಂಧ ಹಲಗೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.