ಕರ್ನಾಟಕ

karnataka

ETV Bharat / state

ಮಂಡ್ಯ: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ - ಮಹಿಳೆಯ ಬರ್ಬರ ಹತ್ಯೆ

ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

mandya
ಮಂಡ್ಯ

By

Published : May 15, 2023, 11:46 AM IST

ಮೃತ ಮಹಿಳೆಯ ಸಂಬಂಧಿಯ ಪ್ರತಿಕ್ರಿಯೆ

ಮಂಡ್ಯ: ಮಹಿಳೆಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆಗೈದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ಗಂಗಾ (38) ಕೊಲೆಯಾಗಿದ್ದಾರೆ. ಮೃತ ಮಹಿಳೆ ಮೈಸೂರು-ಬೆಂಗಳೂರು ಮೇಲ್ಸೇತುವೆಯ ಕೆಳಗೆ ತಮ್ಮ ಗುಂಪಿನೊಂದಿಗೆ ವಾಸ ಮಾಡುತ್ತಿದ್ದರು. ಗುಂಪಿನ‌ ಸದಸ್ಯರೆಲ್ಲರೂ ನಿರಾಶ್ರಿತರರು. ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು.

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಳಿಯಾಳ: ಅರಣ್ಯ ಇಲಾಖೆ ಉರಗ ರಕ್ಷಕನ ಕಾಲು ಕಡಿದು ಭೀಕರ ಹತ್ಯೆ

ಶೌಚಾಲಯದಲ್ಲಿ ಬಿದ್ದು ವ್ಯಕ್ತಿ ಸಾವು:ಆನೇಕಲ್ ಅತ್ತಿಬೆಲೆಯ ಮಂಚನಹಳ್ಳಿ ರಸ್ತೆಯ ಬಾಡಿಗೆ ಮನೆಯಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಶೌಚಾಲಯದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೊಸದುರ್ಗ ಮೂಲದ ಮಂಜುನಾಥ್ (40) ಮೃತರು. ಈತ ಕಂಬಿ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದ. ಹೆಂಡತಿ ಮಂಜುಳಾ ಮತ ಚಲಾಯಿಸಲು ಊರಿಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಹಾಡಹಗಲೇ ಅಟ್ಟಾಡಿಸಿ ಬಸ್ ಡ್ರೈವರ್ ಭೀಕರ ಹತ್ಯೆ

ABOUT THE AUTHOR

...view details