ಮಂಡ್ಯ: ಇಂದು ಮಳವಳ್ಳಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಸದಸ್ಯರು ಇನ್ನುಮುಂದೆ ಚೀನಾ ವಸ್ತುಗಳನ್ನು ಬಹಿಷ್ಕರಿಸುವುದಾಗಿ ಪ್ರತಿಜ್ಞೆ ಮಾಡಿದರು.
ಚೀನಾ ವಸ್ತುಗಳನ್ನು ಬಳದಂತೆ ಪ್ರತಿಜ್ಞೆ ಮಾಡಿದ ವಿಶ್ವ ಹಿಂದೂ ಪರಿಷತ್ ಸದಸ್ಯರು - Chain product boycott news news
ಮಳವಳ್ಳಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಸದಸ್ಯರು ಇನ್ನುಮುಂದೆ ಚೀನಾ ವಸ್ತುಗಳನ್ನು ಬಹಿಷ್ಕರಿಸುವುದಾಗಿ ಪ್ರತಿಜ್ಞೆ ಮಾಡಿದರು.
Mandya
ಚೀನಾ ಸೈನಿಕರ ಪೈಶಾಚಿಕ ಕೃತ್ಯವನ್ನು ಖಂಡಿಸಿ, ಇನ್ನು ಮುಂದೆ ಮೇಡ್ ಇನ್ ಚೀನಾ ವಸ್ತುಗಳನ್ನು ಕೊಳ್ಳುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ ಮಾಡಿದರು.
ಇದಕ್ಕೂ ಮೊದಲು ಒಂದು ನಿಮಿಷಗಳ ಕಾಲ ಹುತಾತ್ಮರಾದ ಭಾರತೀಯ ಯೋಧರಿಗೆ ಮೌನಾಚರಣೆ ಮಾಡಿ ಗೌರವ ಸೂಚಿಸಿದರು. ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ ತುಂಬಲು ನಾವು ಚೀನಾ ವಸ್ತುಗಳ ಖರೀದಿಯನ್ನು ಹಾಗೂ ಮಾರಾಟವನ್ನು ನಿಲ್ಲಿಸಬೇಕು ಎಂದು ಪ್ರತಿಜ್ಞೆ ಮಾಡಲಾಯಿತು.