ಮಂಡ್ಯ: ಅಪರಿಚಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂಗಮ್ ಬಳಿ ನಡೆದಿದೆ.
ಈ ಸುದ್ದಿಯನ್ನೂ ಓದಿ:ತಾಯಿ ಮರಣಶಯ್ಯೆಯ ದುಃಖ ತಾಳದ ಮಗ: ನೇತ್ರಾವತಿ ನದಿಗೆ ಹಾರಿ ಪುತ್ರ ಆತ್ಮಹತ್ಯೆ
ಸುಮಾರು 20 ವರ್ಷ ವಯಸ್ಸಿನ ಅಪರಿಚಿತ ಯುವಕ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.