ಮಂಡ್ಯ:ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ಮತ್ತೋರ್ವ ಯುವಕ ಚಾಕುವಿನಿಂದ ಇರಿದ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ಮೈಸೂರು ತಾಲೂಕು ಕಾಮನಕೆರೆ ಹುಂಡಿ ಗ್ರಾಮದ ಶಿವು(21) ಎಂಬಾತ ಪಾಲಹಳ್ಳಿ ಗ್ರಾಮದ ಯುವಕ ಸಚಿನ್(22)ಗೆ ಚಾಕುವಿನಿಂದ ಇರಿದ್ದಾನೆ. ಸ್ಥಳದಲ್ಲಿದ್ದ ಊರಿನ ಜನರು ತಮ್ಮೂರಿನ ಯುವಕನಿಗೆ ಚಾಕುವಿನಿಂದ ಇರಿದ ಅನ್ಯ ಗ್ರಾಮದ ಸಚಿನ್ಗೆ ಥಳಿಸಿದ್ದಾರೆ.
ಚಾಕುವಿನಿಂದ ಇರಿಸಿಕೊಂಡ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಊರ ಜನರ ಜನರಿಂದ ಥಳಿತಕ್ಕೊಳಗಾದ ಯುವಕನಿಗೂ ಗಂಭೀರ ಗಾಯಗಳಾಗಿದ್ದು, ಪೊಲೀಸರು ಮೈಸೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ.
ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ ಗವಿಸಿದ್ದೇಶ್ವರ ಶ್ರೀ