ಮಂಡ್ಯ: ನಿರ್ಗತಿಕರು ಹಾಗೂ ಕೂಲಿ ಕಾರ್ಮಿಕರಿಗೆ ಯುವಕರು ಊಟ ನೀಡುವ ಮೂಲಕ ಮಾನವೀಯತೆ ಮೆರೆದ ಘಟನೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.
ನಿರ್ಗತಿಕರಿಗೆ ಊಟ ನೀಡಿ ಮಾನವೀಯತೆ ಮೆರೆದ ಯುವಕರು - mandya news
ನಿರ್ಗತಿಕರು ಹಾಗೂ ಕೂಲಿ ಕಾರ್ಮಿಕರಿಗೆ ಯುವಕರು ಊಟ ನೀಡುವ ಮೂಲಕ ಮಾನವೀಯತೆ ಮೆರೆದ ಘಟನೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.
ನಿರ್ಗತಿಕರಿಗೆ ಊಟ ನೀಡಿ ಮಾನವೀಯತೆ ಮೆರೆದ ಯುವಕರು
ವ್ಯಾಪಾರ ಸಂಬಂಧ ಹೊರ ರಾಜ್ಯ ಸೇರಿದಂತೆ ಹೊರ ಜಿಲ್ಲೆಗಳಿಂದ ಗ್ರಾಮಕ್ಕೆ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ಗ್ರಾಮದಲ್ಲಿ ವಾಸ ಮಾಡಿಕೊಂಡಿದ್ದವು. ಆದರೆ ವ್ಯಾಪಾರ ನಿಂತಿರುವುದರಿಂದ ಆಹಾರ ಸಾಮಾಗ್ರಿಗಳ ಸಮಸ್ಯೆ ತಲೆದೋರಿತ್ತು. ಇದನ್ನು ಮನಗಂಡ ಗ್ರಾಮದ ಯುವ ಪಡೆ ಸುಮಾರು 60ಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.
ಸಂತೆ ಮೈದಾನದಲ್ಲಿ ಈ ಕುಟುಂಬಗಳು ವಾಸ ಮಾಡಿಕೊಂಡಿದ್ದು, ಊಟಕ್ಕಾಗಿ ಪರಿತಪಿಸುತ್ತಿದ್ದರು. ಹೀಗಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.