ಕರ್ನಾಟಕ

karnataka

ETV Bharat / state

ಮೈಶುಗರ್ ಕಾರ್ಖಾನೆಯನ್ನ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

ಸರ್ಕಾರದ ಈ ನಡೆ ಖಂಡನೀಯ. ಹೀಗಾಗಿ, ಸರ್ಕಾರ ಕಾರ್ಖಾನೆಯನ್ನ ಆರಂಭಿಸುವವರೆಗೂ ನಿರಂತರವಾಗಿ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು..

By

Published : Mar 27, 2021, 5:47 PM IST

Youth Congress Unit Protest  in Mandya
ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ

ಮಂಡ್ಯ :ಮೈಶುಗರ್ ಕಾರ್ಖಾನೆಯನ್ನ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಬೇಕು. ಸರ್ಕಾರವೇ ಕಾರ್ಖಾನೆಯನ್ನ ಪುನಾರಂಭ ಮಾಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಂಡ್ಯದಲ್ಲಿ ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ

ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ ಬಳಿಯಿಂದ ಡಿಸಿ ಕಚೇರಿವರೆಗೂ ನೂರಾರು ಎತ್ತಿನಗಾಡಿಗಳು, ಟ್ರ್ಯಾಕ್ಟರ್​​ಗಳು ಹಾಗೂ ಬೈಕ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಮಂಡ್ಯದ ಮೈಶುಗರ್‌ ಸಕ್ಕರೆ ಕಾರ್ಖಾನೆ ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆ. ಈ ಕಾರ್ಖಾನೆ ಸ್ಥಗಿತವಾಗಿ ಎರಡೂವರೆ ವರ್ಷಗಳೇ ಆಗಿವೆ. ಸರ್ಕಾರ ಈ ಕಾರ್ಖಾನೆಯನ್ನ ಖಾಸಗಿಯವರಿಗೆ ಗುತ್ತಿಗೆ ನೀಡಲು ನಿರ್ಧರಿಸಿದೆ.

ಸರ್ಕಾರದ ಈ ನಡೆ ಖಂಡನೀಯ. ಹೀಗಾಗಿ, ಸರ್ಕಾರ ಕಾರ್ಖಾನೆಯನ್ನ ಆರಂಭಿಸುವವರೆಗೂ ನಿರಂತರವಾಗಿ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಇನ್ನು, ಕೇಂದ್ರ ಸರ್ಕಾರ ದಿನ ಬಳಕೆಯ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನ ಬೇಕಾಬಿಟ್ಟಿ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಈ ದರ ಏರಿಕೆಯಿಂದ ಬಡವರು, ಕೂಲಿ ಕಾರ್ಮಿಕರು, ರೈತರ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ನಿಯಮ ಮರೆತ ಕೈ ನಾಯಕರು :ಪ್ರತಿಭಟನೆಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದ ಕೈ ನಾಯಕರು, ಕಾರ್ಯಕರ್ತರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಅಟ್ಟಹಾಸ ಜಿಲ್ಲೆಯಲ್ಲಿ ದಿನೇದಿನೆ ಹೆಚ್ಚಾಗುತ್ತಿದ್ದರೂ ಸಾವಿರಾರು ಜನ ಸೇರಿ ಪ್ರತಿಭಟಿಸಲು ಅನುಮತಿ ನೀಡಿದ್ದು ಹಾಗೂ ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೂ ಸುಮ್ಮನಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details