ಮಂಡ್ಯ: ವಿದ್ಯುತ್ ಕಂಬ ಏರಿ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.
ಕಂಬ ಏರಿ ಲೈನ್ ಸರಿಪಡಿಸ್ತಿದ್ದಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು - ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ
ಕಂಬ ಏರಿ ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಪ್ರವಹಿಸಿ ಯುವಕ ಸಾವು
ಪುಟ್ಟಸಿದ್ದ(30) ಮೃತ ದುರ್ದೈವಿ. ಈತ ವಿದ್ಯುತ್ ಕಂಬದ ಮೇಲೇರಿ ಲೈನ್ ಸರಿಪಡಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.