ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಇಂದು 101 ಕೊರೊನಾ ಸೋಂಕಿತ ಪ್ರಕರಣ ಪತ್ತೆ: 722 ಮಂದಿ ಗುಣಮುಖ... - mysore corona news

ಮೈಸೂರು ಜಿಲ್ಲೆಯಲ್ಲಿ ಇಂದು 101 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿವೆ.

Mysore
ಮೈಸೂರು

By

Published : Oct 1, 2020, 9:42 PM IST

ಮೈಸೂರು: ಇಂದು ಜಿಲ್ಲೆಯಲ್ಲಿ 101 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 722 ಮಂದಿ ಡಿಸ್ಚಾರ್ಜ್ ಹಾಗೂ 25 ಜನ ಸಾವನ್ನಪ್ಪಿದಾರೆ.

ಇಂದು ಜಿಲ್ಲೆಯಲ್ಲಿ 101 ಸೋಂಕಿತ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34,619ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಂದೇ ದಿನ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 722 ಆಗಿದ್ದು, ಆ ಮೂಲಕ ಡಿಸ್ಚಾರ್ಜ್ ಆದವರ ಸಂಖ್ಯೆ ಜಾಸ್ತಿಯಾಗಿದೆ. ಒಟ್ಟು 27,393 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 6,464 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಒಂದೇ ದಿನ ಜಿಲ್ಲೆಯಲ್ಲಿ ಕೊರೊನಾದಿಂದ 25 ಜನ ಮೃತಪಟ್ಟಿದ್ದು, ಆ ಮೂಲಕ ಸಾವನ್ನಪ್ಪಿದವರ ಸಂಖ್ಯೆ 762 ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ 25 ಜನ ಮೃತಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದೆ.

ABOUT THE AUTHOR

...view details