ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು ಒಂದೇ ದಿನ ಬರೋಬ್ಬರಿ 11 ಮಂದಿ ಕೊನೆಯುಸಿರೆಳೆದಿದ್ದಾರೆ. ಅಲ್ಲದೇ 544 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿ ಸೋಂಕಿತರ ಸಂಖ್ಯೆ 8,467ಕ್ಕೆ ಏರಿಕೆಯಾಗಿದೆ.
ಮೈಸೂರು; ಕೊರೊನಾಗೆ 11 ಬಲಿ...ಬರೋಬ್ಬರಿ 544 ಮಂದಿಗೆ ಸೋಂಕು ದೃಢ! - Mysore corona case
ಜಿಲ್ಲೆಯಲ್ಲಿಂದು ಒಂದೇ ದಿನ ಬರೋಬ್ಬರಿ 11 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದು, ಮೃತರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚು-ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
DC Abhiram G Shankar
ಜೊತೆಗೆ ಆಶಾದಾಯಕ ಬೆಳೆವಣಿಗೆ ಎನ್ನುವಂತೆ 668 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. 8,467 ಸೋಂಕಿತರ ಪೈಕಿ 4,781 ಜನರು ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 3,424 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 262 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚು-ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.