ಮೈಸೂರು: ಜಿಲ್ಲೆಯಲ್ಲಿ 90 ಜನ ಕೊರೊನಾ ಸೋಂಕಿತರು ಗುಣಮುಖರಾದ ನಂತರ ಮತ್ತೆ 4 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಇಂದು 2 ಪ್ರಕರಣ ಪತ್ತೆಯಾಗಿದೆ.
7 ದಿನಗಳ ನಂತರ ಮೈಸೂರಿನಲ್ಲಿ ಮತ್ತೆ 2 ಕೊರೊನಾ ಪ್ರಕರಣ ಪತ್ತೆ
ಪ್ರಾರಂಭದಿಂದ ಗಣನೆಗೆ ತೆಗೆದುಕೊಂಡರೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 94 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 91 ಜನ ಗುಣಮುಖರಾಗಿದ್ದಾರೆ. ಇನ್ನೂ 3 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾರಂಭದಿಂದ ಗಣನೆಗೆ ತೆಗೆದುಕೊಂಡರೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 94 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 91 ಜನ ಗುಣಮುಖರಾಗಿದ್ದಾರೆ. ಇನ್ನೂ 3 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ ಪಿ-2565 ಪ್ರಕರಣ ಮತ್ತು ಪಿ- 2561 ಇವರಲ್ಲಿ ಒಬ್ಬ ಐರ್ಲೆಂಡ್ನಿಂದ ಹಿಂತಿರುಗಿದ ವ್ಯಕ್ತಿಯಾಗಿದ್ದು, ಅಂತಾರಾಷ್ಟ್ರೀಯ ಪ್ರಯಾಣದ ಪ್ರಯಾಣ ಹಿನ್ನೆಲೆ ಹೊಂದಿದ್ದಾನೆ. ಮತ್ತೊಬ್ಬ ರಾಜಸ್ಥಾನ ಪ್ರಯಾಣ ಮಾಡಿದ ಹಿನ್ನೆಲೆ ಹೊಂದಿದ್ದಾನೆ. ಸದ್ಯ ಇಬ್ಬರೂ ಸಹ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.