ಮೈಸೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರು ಹಾಗೂ ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ 2 ಲಕ್ಷ ಬಹುಮಾನ ನೀಡಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 2 ಲಕ್ಷ ಬಹುಮಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಪೊಲೀಸ್ ಆಯುಕ್ತಾರಾದ ಡಾ. ಚಂದ್ರಗುಪ್ತ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.