ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಇಂದು 202 ಕೊರೊನಾ ಪ್ರಕರಣ ಪತ್ತೆ: 25 ಸಾವು - Mysore corona news

ಇಂದು ಮೈಸೂರು ಜಿಲ್ಲೆಯಲ್ಲಿ 202 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 2,240 ಜನ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ 25 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Mysore
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್

By

Published : Aug 24, 2020, 11:22 PM IST

ಮೈಸೂರು: ಇಂದು ಜಿಲ್ಲೆಯಲ್ಲಿ 202 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 2,240 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ 25 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 202 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,598 ಸೋಂಕಿತ ಪ್ರಕರಣಗಳಿದ್ದು, ಅದರಲ್ಲಿ 9,542 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

2,711 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಒಂದೇ ದಿನ 2,240 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು 345 ಮಂದಿ ಜಿಲ್ಲೆಯಲ್ಲಿ ಮರಣ ಹೊಂದಿದ್ದಾರೆ. ಇಂದು 25 ಮಂದಿ ಸೋಂಕಿತರು ಸಾವನ್ನಪ್ಪಿದಾರೆ.

ಇನ್ನು ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್​​ಗಳನ್ನು ಮಾಡಲಾಗುತ್ತಿದೆ. ಜೊತೆಗೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ABOUT THE AUTHOR

...view details