ಮೈಸೂರು:ಜಿಲ್ಲೆಯಲ್ಲಿ ಇಂದು 242 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 15 ಜನ ಸಾವನ್ನಪ್ಪಿದ್ದಾರೆ. ಇಂದು 168 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಮೈಸೂರಲ್ಲಿಂದು 242 ಸೋಂಕಿತ ಪ್ರಕರಣಗಳು ಪತ್ತೆ: 15 ಜನ ಸಾವು - corona news
ಮೈಸೂರಲ್ಲಿ ಇಂದು 242 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು 168 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,718 ಆಗಿದ್ದು, ಅದರಲ್ಲಿ 2,662 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 242 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,718 ಆಗಿದ್ದು, ಅದರಲ್ಲಿ 2,662 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,853 ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ ಒಟ್ಟು 213 ಮಂದಿ ಜಿಲ್ಲೆಯಲ್ಲಿ ಮರಣ ಹೊಂದಿದ್ದಾರೆ. ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.