ಕರ್ನಾಟಕ

karnataka

ETV Bharat / state

ಜೆಎಸ್​ಎಸ್​​ ಆಸ್ಪತ್ರೆಯಿಂದ 300 ಆಕ್ಸಿಜ‌ನ್ ಬೆಡ್: ಸುತ್ತೂರು ಶ್ರೀ

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಹೆಚ್ಚುವರಿ ಆಕ್ಸಿಜನ್ ಬೆಡ್​​ಗಳನ್ನು ನೀಡಬೇಕೆಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶ್ರೀಗಳು ಒಂದು ವಾರದಲ್ಲಿ 300 ಆಕ್ಸಿಜನ್ ಬೆಡ್​​ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

300 Oxygen Bed from JSS: Suttur  swamiji
ಸೂತ್ತೂರು ಮಠಕ್ಕೆ ಭೇಟಿ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

By

Published : May 10, 2021, 3:46 PM IST

ಮೈಸೂರು:ಜೆಎಸ್​ಎಸ್ ಆಸ್ಪತ್ರೆ ವತಿಯಿಂದ ಜಿಲ್ಲಾಡಳಿತಕ್ಕೆ ಇನ್ನೊಂದು ವಾರದಲ್ಲಿ ಒಟ್ಟು 300 ಆಕ್ಸಿಜ‌ನ್ ಬೆಡ್​​ಗಳನ್ನು ನೀಡಲಾಗುವುದು ಎಂದು ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಜಿ ತಿಳಿಸಿದರು.

ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಚರ್ಚೆ ಮಾಡಿದರು. ಈ ವೇಳೆ ಹೆಚ್ಚುವರಿ ಆಕ್ಸಿಜನ್ ಬೆಡ್​​ಗಳನ್ನು ನೀಡಬೇಕೆಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶ್ರೀಗಳು ಒಂದು ವಾರದಲ್ಲಿ 300 ಆಕ್ಸಿಜನ್ ಬೆಡ್​​ಗಳನ್ನು ನೀಡಲಾಗುವುದು. ಕೋವಿಡ್​ 2ನೇ ಅಲೆ ಹೆಚ್ಚಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸಲು ಗುಜರಾತ್​​ನಲ್ಲಿ ಒಂದು ಹೊಸ ಯೂನಿಟ್ ಖರೀದಿ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ 200 ಜನಕ್ಕೆ ಆಕ್ಸಿಜನ್ ನೀಡಬಹುದು ಎಂದರು.

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್

ಇನ್ನು ಕೋವಿಡ್ 3ನೇ ಅಲೆ ಬರಬಹುದು ಎಂಬ ಉದ್ದೇಶದಿಂದ ಈಗಾಗಲೇ ನಾವೆಲ್ಲ ಜನರ ಹಿತ ದೃಷ್ಟಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಚಿಕಿತ್ಸೆ ಸಿಗುತ್ತದೆ ಎಂದು ಉದಾಸೀನ ಮಾಡಬಾರದು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮನುಷ್ಯ ಆರೋಗ್ಯವಾಗಿರಬೇಕಾದರೆ ಜೀವ ಮುಖ್ಯ. ಜೀವ ಇದ್ದರೆ ತಾನೆ ಜೀವನ ಎಂದು ಸುತ್ತೂರು ಶ್ರೀಗಳು ಜನರಿಗೆ ಎಚ್ಚರಿಕೆ ಸೂಚನೆ ನೀಡಿದರು.

ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ:

ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಆಮ್ಲಜನಕ ಸಹಿತ ಹಾಸಿಗೆ ಹೆಚ್ಚಳ ಮಾಡಲು ಸುತ್ತೂರು ಶ್ರೀಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಜೆ.ಎಸ್.ಎಸ್.ನಲ್ಲಿ 417 ಬೆಡ್​ಗಳನ್ನು ಕೊಟ್ಟಿದ್ದಾರೆ. ಇದರಲ್ಲಿ 100 ಆಮ್ಲಜನಕ ಸಹಿತ ಬೆಡ್​​ಗಳಿವೆ. ಈ ಆಕ್ಸಿಜನೇಟೆಡ್ ಬೆಡ್​ಗಳ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುವಂತೆ ಕಳೆದ ವಾರ ಶ್ರೀಗಳನ್ನು ಭೇಟಿ ಮಾಡಿ ಕೇಳಿದ್ದೆವು. ಶ್ರೀಗಳು ಅದಕ್ಕೆ ಸ್ಪಂದಿಸಿದ್ದಾರೆ ಎಂದರು.

ಆಕ್ಸಿಜನೇಟೆಡ್ ಬೆಡ್​ಗಳನ್ನು ಹೆಚ್ಚಿಸಿದರೆ ಆಕ್ಸಿಜನ್ ಪೂರೈಕೆ ಹೆಚ್ಚಿಸುವಂತೆ ಕೇಳಿದ್ದಾರೆ. ಇದರ ಉಸ್ತುವಾರಿ ನೋಡಿಕೊಳ್ಳುವ ಪ್ರತಾಪ್ ಸಿಂಹ ಅವರು ಅದರಂತೆ ಕ್ರಮವಹಿಸುವರು. ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಹಾಗೂ ಲಿಕ್ವಿಡ್ ಆಕ್ಸಿಜನ್ ಘಟಕ ಹೆಚ್ಚಿಸಲು ಗುಜರಾತ್‌ನ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಸೋಮಶೇಖರ್ ತಿಳಿಸಿದರು.

ABOUT THE AUTHOR

...view details